HomeLatest NewsBREAKING: ಪತ್ನಿ ಕಾಟಕ್ಕೆ ಬೇಸತ್ತು ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಪತಿ

BREAKING: ಪತ್ನಿ ಕಾಟಕ್ಕೆ ಬೇಸತ್ತು ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಪತಿ

ಬೆಳಗಾವಿ: ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದೆ.

ಸುನಿಲ್ ಮೂಲಿಮನಿ(33) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ತನ್ನ ಕಂಪ್ಯೂಟರ್ ಶಾಪ್ ನಲ್ಲಿ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನಿಲ್ ಮಾಡಿಕೊಂಡಿದ್ದಾರೆ.

ನಾಲ್ಕು ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಸುನಿಲ್ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಒಂದು ಮಗು ಇದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular