BREAKING : ಇಂದು ವರನಟ ಡಾ.ರಾಜ್ ಕುಮಾರ್ 19 ನೇ ಪುಣ್ಯಸ್ಮರಣೆ : ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು.!

ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ 19 ನೇ ಪುಣ್ಯಸ್ಮರಣೆ ಹಿನ್ನೆಲೆ ರಾಜ್ ಕುಟುಂಬಸ್ಥರು ಡಾ.ರಾಜ್ ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ನಟ ರಾಜ್ ಕುಮಾರ್ ಅವರ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಮಕ್ಕಳು, ಮೊಮ್ಮಕ್ಕಳು. ನಟ ಶಿವರಾಜ್ ಕುಮಾರ್ ಹಾಗೂ ಅವರ ಮಕ್ಕಳು ಸೇರಿದಂತೆ ಡಾ.ರಾಜ್ ಕುಟುಂಬ ಉಪಸ್ಥಿತರಿದ್ದರು.

ರಂಗಭೂಮಿಯ ಮೇರುನಟ
ಡಾ. ರಾಜ್ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ. ವರನಟ,ನಟಸಾರ್ವಭೌಮ ಮೊದಲಾದ ಬಿರುದುಗಳು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ ಇವರು.

ನಟಸಾರ್ವಭೌಮ ಡಾ. ರಾಜ್ಕುಮಾರ್ (ಜನನ: ಏಪ್ರಿಲ್ ೨೪, ೧೯೨೯ – ಮರಣ: ಏಪ್ರಿಲ್ ೧೨, ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ೧೯೫೪-೨೦೦೫ರವರೆಗೆ ೫ ದಶಕದಗಳ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ ಹೆಗ್ಗಳಿಕೆ ಡಾ. ರಾಜ್ ರದ್ದು.. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು, ೧೯೭೩ರಲ್ಲಿಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read