ವಿಶಾಖಪಟ್ಟಣಂ: ಮನುಷ್ಯ ಶಿಸ್ತು ಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ಇಂದು ಪ್ರತಿಯೊಬ್ಬರ ಜೀವನದ ಭಾಗವಾಗಿದೆ ಎಂದು ಮೋದಿ ಹೇಳಿದ್ದಾರೆ.
ಮಾನಸಿಕ ದೈಹಿಕ ಆರೋಗ್ಯ ಕಾಪಾಡಲು ಯೋಗಾಸಹಕಾರಿಯಾಗಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯ ಒಂದು ಭಾಗವಾಗಿದೆ. ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದುರದೃಷ್ಟವಶಾತ್, ಇಂದು ಇಡೀ ಜಗತ್ತು ಕೆಲವು ಉದ್ವಿಗ್ನತೆ, ಅಶಾಂತಿ ಮತ್ತು ಅಸ್ಥಿರತೆಯನ್ನು ಎದುರಿಸುತ್ತಿದೆ. ಅಂತಹ ಸಮಯದಲ್ಲಿ, ಯೋಗವು ನಮಗೆ ಶಾಂತಿಯ ದಿಕ್ಕನ್ನು ನೀಡುತ್ತದೆ. ಯೋಗವು ಮಾನವೀಯತೆಯು ಉಸಿರಾಡಲು, ಸಮತೋಲನಗೊಳಿಸಲು ಮತ್ತು ಮತ್ತೆ ಸಂಪೂರ್ಣವಾಗಲು ಅಗತ್ಯವಿದೆ ಎಂದು ಹೇಳಿದ್ದಾರೆ.

