ಉಡುಪಿ: ನಿನ್ನೆ ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಯುವತಿ ಮೃತಪಟ್ಟಿದ್ದಾರೆ.
ಮೈಸೂರಿನ ದಿಶಾ(23) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಧರ್ಮರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಶಂಕರಪ್ಪ ಮತ್ತು ಸಿಂಧು ಮೃತಪಟ್ಟಿದ್ದರು. ಮೈಸೂರಿನ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳು ಪ್ರವಾಸಕ್ಕೆ ಬಂದಿದ್ದು, ಡೆಲ್ಟಾ ಬೀಚ್ ನಿಂದ ಎರಡು ಬೋಟ್ ಗಳಲ್ಲಿ 28 ಯುವಕರು, ಯುವತಿಯರು ತೆರಳಿದ್ದರು.
ಒಂದು ಬೋಟ್ ಮಗುಚಿ 14 ಜನ ಸಮುದ್ರ ಪಾಲಾಗಿದ್ದರು. ನಿನ್ನೆ ಇಬ್ಬರು ಮೃತಪಟ್ಟಿದ್ದು, ಇಂದು ದಿಶಾ ಕೊನೆಯುಸಿರೆಳೆದಿದ್ದಾರೆ.

