ಕೋಲಾರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟಿದ್ದಾರೆ. ಅಪಾಘತದಲ್ಲಿ ದಂಪತಿ ಹಾಗೂ ಮಗಳು ಮೃತಪಟ್ಟ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿ. ಗುಟ್ಟಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಚಮಕಲಹಳ್ಳಿ ಗ್ರಾಮದ ನಿವಾಸಿ ಅಬೂಬಕರ್(38), ಅವರ ಪತ್ನಿ ಸಾಬೀರಾ(37), ಪುತ್ರಿ ಜೋಯಾ(16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರು ಬೈಕ್ ನಲ್ಲಿ ತೆರಳುವಾಗ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

