ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ವರದಾ ನದಿಗೆ ಟ್ರ್ಯಾಕ್ಟರ್ ಬಿದ್ದಿದೆ. ಹಾವೇರಿ ತಾಲೂಕಿನ ಮರಡೂರು ಗ್ರಾಮದ ಬಳಿ ಘಟನೆ ನಡೆದಿದೆ. ನೀರಿಗೆ ಬಿದ್ದ ಟ್ರ್ಯಾಕ್ಟರ್ ನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೆಣಸಿನಕಾಯಿ ತುಂಬಿಕೊಂಡು ಟ್ರ್ಯಾಕ್ಟರ್ ನಲ್ಲಿ ಮಾರುಕಟ್ಟೆಗೆ ಹೊರಟಿದ್ದರು. ಸುರೇಶ ದೊಡ್ಡಗೌಡರ ಎನ್ನುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.
ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಕಮ್ ಬ್ಯಾರೇಜ್ ಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ದೂರಿದ್ದಾರೆ. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.