HomeLatest NewsBREAKING: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಟ್ರ್ಯಾಕ್ಟರ್: ನೀರಲ್ಲಿ ಮುಳುಗಿದ್ದ ಮೂವರನ್ನು ರಕ್ಷಿಸಿದ ಸ್ಥಳೀಯರು

BREAKING: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಟ್ರ್ಯಾಕ್ಟರ್: ನೀರಲ್ಲಿ ಮುಳುಗಿದ್ದ ಮೂವರನ್ನು ರಕ್ಷಿಸಿದ ಸ್ಥಳೀಯರು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ವರದಾ ನದಿಗೆ ಟ್ರ್ಯಾಕ್ಟರ್ ಬಿದ್ದಿದೆ. ಹಾವೇರಿ ತಾಲೂಕಿನ ಮರಡೂರು ಗ್ರಾಮದ ಬಳಿ ಘಟನೆ ನಡೆದಿದೆ. ನೀರಿಗೆ ಬಿದ್ದ ಟ್ರ್ಯಾಕ್ಟರ್ ನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಮೆಣಸಿನಕಾಯಿ ತುಂಬಿಕೊಂಡು ಟ್ರ್ಯಾಕ್ಟರ್ ನಲ್ಲಿ ಮಾರುಕಟ್ಟೆಗೆ ಹೊರಟಿದ್ದರು. ಸುರೇಶ ದೊಡ್ಡಗೌಡರ ಎನ್ನುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಕಮ್ ಬ್ಯಾರೇಜ್ ಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ದೂರಿದ್ದಾರೆ. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular