ಹಾವೇರಿ: ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅಂತರವಳ್ಳಿಯಲ್ಲಿ ವಿದ್ಯುತ್ ಕಂಬಕ್ಕೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
23 ವರ್ಷದ ಪರಸಪ್ಪ ಪೂಜಾರ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

