ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಟೋಯಿಂಗ್ ಆರಂಭಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವತಿಯಿಂದ 6 ಟೋಯಿಂಗ್ ವಾಹನಗಳನ್ನು ಟ್ರಾಫಿಕ್ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.
ಇವತ್ತು 6 ಟೋಯಿಂಗ್ ವಾಹನಗಳನ್ನು ಬಳಕೆ ಮಾಡುತ್ತಿದ್ದೇವೆ ಎಂದು ಸಂಚಾರ ವಿಭಾಗದ ಜಂಟಿ ಪೋಲಿಸ್ ಆಯುಕ್ತ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.
ಜಿಬಿಎ ವತಿಯಿಂದ ಅಧಿಕೃತವಾಗಿ ನೋಟಿಫಿಕೇಶನ್ ಆಗುತ್ತದೆ. ಇಂದು ಟೋಯಿಂಗ್ ಶುಲ್ಕ ಪಡೆಯುವುದಿಲ್ಲ. ಬೆಂಗಳೂರಿನಲ್ಲಿ ಇಂದು ಎಲ್ಲಾ ಫ್ಲೈ ಓವರ್ ಗಳನ್ನು ಬಂದ್ ಮಾಡಲಾಗುವುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಫ್ಲೈ ಓವರ್ ಗಳನ್ನು ಬಂದ್ ಮಾಡುತ್ತೇವೆ. ಏರ್ಪೋರ್ಟ್ ಭಾಗದಲ್ಲಿ ಕಾರ್ ಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುವುದು. ಕೋರಮಂಗಲದಲ್ಲಿ ರಸ್ತೆ ಪಕ್ಕ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಟೋಯಿಂಗ್ ಮಾಡಲಾಗಿದೆ ಎಂದು ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

