ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ ನಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಘಟನೆ ನಡೆದಿದೆ. ಸಂಕೇತ್(16), ಸೂರಜ್(15), ಆಶಿಶ್(14) ನೀರು ಪಾಲಾದ ಮಕ್ಕಳು. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.