HomeLatest NewsBREAKING: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುವಾಗ ಪ್ರವಾಸಿಗ ನೀರು ಪಾಲು

BREAKING: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುವಾಗ ಪ್ರವಾಸಿಗ ನೀರು ಪಾಲು

ಶಿವಮೊಗ್ಗ: ಅಬ್ಬಿಫಾಲ್ಸ್ ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಘಟನೆ ನಡೆದಿದೆ.

ರಮೇಶ್(35) ನೀರು ಪಾಲಾದವರು ಎಂದು ಹೇಳಲಾಗಿದೆ. ರಮೇಶ್ ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯ ಮ್ಯಾನೇಜರ್ ಆಗಿದ್ದಾರೆ. ಐವರು ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದ ವೇಳೆ ರಮೇಶ್ ಪೋಟೋ ತೆಗೆಸಿಕೊಳ್ಳುವಾಗ ನೀರುಪಾಲಾಗಿದ್ದಾರೆ.

ಫಾಲ್ಸ್ ತುದಿಯಲ್ಲಿ ಬಂಡೆಯೊಂದರ ಮೇಲೆ ರಮೇಶ್ ಕುಳಿತುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಸಂಭ್ರಮಿಸುವಾಗ ಬಂಡೆಯಿಂದ ಜಾರಿದ್ದಾರೆ. ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಫಾಲ್ಸ್ ಕೆಳಬಾಗದಲ್ಲಿ ರಮೇಶ್ ಮೃತದೇಹ ಪತ್ತೆಯಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular