ಯಾದಗಿರಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಮೊಟ್ನಳ್ಳಿ ಸಮೀಪ ನಡೆದಿದೆ.
ವೈಶಾಲಿ(17), ನವೀತಾ(16) ಮೃತಪಟ್ಟವರು ಎಂದು ಹೇಳಲಾಗಿದೆ. ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಬಾವಿಗೆ ಬಿದ್ದಿದ್ದ ಯುವತಿಯರ ಶವಗಳನ್ನು ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.