ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯಲ್ಲಿ ಕಬ್ಬಿಣದ ಬಿಲ್ಲೆಟ್ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾರೆ.
ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಭದ್ರಾವತಿಯ ವಿನೋದ್ ಕುಮಾರ್ ಎಸ್.(36) ಮೃತಪಟ್ಟವರು ಎಂದು ಹೇಳಲಾಗಿದೆ. ಕೆಲಸ ವೇಳೆ ಬಿಲ್ಲೆಟ್ ಇಳಿಸುವಾಗ ಘಟನೆ ನಡೆದಿದೆ. ಕ್ರೇನ್ ಕಟ್ ಆಗಿ ವಿನೋದ್ ಕಾಲಿನ ಮೇಲೆ ಕಬ್ಬಿಣದ ಬಿಲ್ಲೆಟ್ ಬಿದ್ದಿದೆ. ತೀವ್ರ ರಕ್ತಸ್ರಾವದಿಂದಾಗಿ ವಿನೋದ್ ಕುಮಾರ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುತ್ತಿಗೆ ನೌಕರ ವಿನೋದ್ ಕುಮಾರ್ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

