HomeKarnatakaBREAKING: ವಾಕಿಂಗ್ ಹೋದಾಗಲೇ ಘೋರ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

BREAKING: ವಾಕಿಂಗ್ ಹೋದಾಗಲೇ ಘೋರ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಗದಗ: ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರದ ಚನ್ನಮ್ಮ ಕಾಲೇಜಿನ ಬಳಿ ಘಟನೆ ನಡೆದಿದೆ.

ಶಿವಾನಂದ ಹುಲಕೋಟಿ, ಅಶೋಕ ಸರವಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಎಂ.ಎಸ್. ಚಾಕಲಬಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೇಶ್ವರದ ಈ ಮೂವರು ಮುಂಜಾನೆ ಎದ್ದು ವಾಕಿಂಗ್ ಗೆ ಹೋಗಿದ್ದರು. ಈ ವೇಳೆ ಅತಿವೇಗವಾಗಿ ಬಂದ ಕಾರ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಎಂ.ಎಸ್. ಚಾಕಲಬಿ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಾರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular