ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಮಾಲತೇಶ ಕುರುಬರ(19), ಬಸವರಾಜ(38) ಮೃತಪಟ್ಟವರು ಎಂದು ಹೇಳಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಾಚರಣೆ ನಡೆಸಿ ಮಾಲತೇಶ ಶವ ಹೊರ ತೆಗೆದಿದ್ದಾರೆ. ಬಸವರಾಜ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.