HomeLatest NewsBREAKING: ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ಸಾವು

BREAKING: ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ಸಾವು

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಮಾಲತೇಶ ಕುರುಬರ(19), ಬಸವರಾಜ(38) ಮೃತಪಟ್ಟವರು ಎಂದು ಹೇಳಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಾಚರಣೆ ನಡೆಸಿ ಮಾಲತೇಶ ಶವ ಹೊರ ತೆಗೆದಿದ್ದಾರೆ. ಬಸವರಾಜ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular