ಬೆಂಗಳೂರು: ಬೆಂಗಳೂರಿನ ಮಡಿವಾಳದ ಸಿದ್ಧಾರ್ಥ ಕಾಲೋನಿಯಲ್ಲಿ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದಾರೆ.
ಜಾರ್ಖಂಡ್ ಮೂಲದ 30 ವರ್ಷದ ಕಾರ್ಮಿಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಣ್ಣು ಕುಸಿತ ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.