ಮೈಸೂರು: ಸಾಲಿಗ್ರಾಮ ಪಟ್ಟಣದಲ್ಲಿ ಕಾಲುವೆಗೆ ಈಜಲು ಹೋಗಿದ್ದ ಮೂವರು ಬಾಲಕರ ನೀರು ಪಾಲಾಗಿದ್ದಾರೆ, ಮೈಸೂರು ಜಿಲ್ಲೆ ಸಾಲಿಗ್ರಾಮ ಪಟ್ಟಣದಲ್ಲಿ ಘಟನೆ ನಡೆದಿದೆ.
ಅಯಾನ್(16), ಅಜಾನ್(13), ಲುಕ್ಮಾನ್(14) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಾಲಿಗ್ರಾಮದ ಭಾಸ್ಕರ ದೇವಸ್ಥಾನದ ಬಳಿ ದುರಂತ ಸಂಭವಿಸಿದೆ.
ಚಾಮರಾಜ ಎಡದಂಡೆ ಕಾಲುವೆಯಲ್ಲಿ ಘಟನೆ ನಡೆದಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಶವಕ್ಕಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.