ವಿಜಯಪುರ: ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ.
ಓರ್ವ ಬಾಲಕ ಹಾಗೂ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಶಿವಮ್ಮ ರಾಥೋಡ್(8), ಕಾರ್ತಿಕ್ ರಾಥೋಡ್(7). ಸ್ವಪ್ನಾ ರಾಥೋಡ್(12) ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟವರು ಎಂದು ಹೇಳಲಾಗಿದೆ. ಕುರಿಗಳ ಜೊತೆ ಆಟವಾಡುವಾಗ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಘಟನೆ ನಡೆದಿದೆ. ವಿಜಯಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.