HomeIndiaBREAKING : ಜಮ್ಮುಕಾಶ್ಮೀರದ ಖಾಜಿಗುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ : ಅಪಾಯದಿಂದ ಪ್ರಯಾಣಿಕರು ಪಾರು

BREAKING : ಜಮ್ಮುಕಾಶ್ಮೀರದ ಖಾಜಿಗುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ : ಅಪಾಯದಿಂದ ಪ್ರಯಾಣಿಕರು ಪಾರು

ಶ್ರೀನಗರ : ಕಾಶ್ಮೀರ ಕಣಿವೆಯ ಖಾಜಿಗುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬುಡ್ಗಾಮ್ ಮತ್ತು ಬನಿಹಾಲ್ ನಡುವೆ ಚಲಿಸುತ್ತಿದ್ದ ರೈಲಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಎಂಜಿನ್ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ರೈಲ್ವೆ ಅಧಿಕಾರಿಗಳು ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ರೈಲ್ವೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬೆಂಕಿಯನ್ನು ನಂದಿಸಿದರು, ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular