ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಬಸ್ ಅಗ್ನಿ ದುರಂತಕ್ಕೀಡಾದ ಹಿನ್ನೆಲೆ ಸಾರಿಗೆ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೋಲ್ ಸಮೀಪ ಬಸ್ ಗಳ ಪರಿಶೀಲನೆ ನಡೆಸಲಾಗಿದೆ. ಸಾರಿಗೆ ಇಲಾಖೆ ಅಪರ ಆಯುಕ್ತರಾದ ಓಂಕಾರೇಶ್ವರಿ ಹಾಗೂ ಸಾರಿಗೆ ಇಲಾಖೆ ಜಂಟಿ ಆಯುಕ್ತರಾದರೆ ಶೋಭಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.
ಸ್ಲೀಪರ್ ಕೋಚ್ ಬಸ್ ಗಳ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ 30 ಬಸ್ ಗಳನ್ನು ಸೀಜ್ ಮಾಡಲಾಗಿದೆ. ಮುಂಜಾನೆ 4 ಗಂಟೆಯಿಂದ 30ಕ್ಕೂ ಅಧಿಕ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ದೇವನಹಳ್ಳಿಯಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

 
			 
		 
		 
		 
		 Loading ...
 Loading ... 
		 
		 
		