HomeLatest NewsBREAKING: ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ: ಬಸ್ ಗಳಲ್ಲಿ ಸುರಕ್ಷತಾ ಕ್ರಮ...

BREAKING: ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ: ಬಸ್ ಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲನೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಬಸ್ ಗೆ ಬೆಂಕಿ ತಗುಲಿ 19 ಪ್ರಯಾಣಿಕರು ಸಾವನ್ನಪ್ಪಿದ ಬೆನ್ನಲ್ಲೇ ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮದ ನಾಲ್ವರು ಎಂಡಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಬಸ್ ಗಳಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಎಂಡಿ ಗಳಿಗೆ ಪತ್ರ ಬರೆದು ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಸಾರಿಗೆ ಸಂಸ್ಥೆ ಬಸ್ ಗಳ ಸುರಕ್ಷತೆ ಪರಿಶೀಲನೆ ನಡೆಸಬೇಕು. ಬಸ್ ಗಳಲ್ಲಿ ಯಾವುದೇ ವಾಣಿಜ್ಯ ಸರಕು, ಲಗೇಜ್ ಗಳನ್ನು ಸಾಗಿಸುವ ವೇಳೆಯಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಪೋಟಕ ವಸ್ತು ಸಾಗಿಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸಿ ಬಸ್ ಗಳಲ್ಲಿ ಅವಘಡದ ಸಂದರ್ಭದಲ್ಲಿ ಗಾಜು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಗಳನ್ನು ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸದ ಗಳ ನವೀಕರಣದ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ನ್ಯೂನ್ಯತೆ ಕಂಡುಬಂದರೂ ಸಂಬಂಧಪಟ್ಟವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಪ್ರಯಾಣಿಕರ ಸುರಕ್ಷತೆಯೇ ನಮ್ಮ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕೂಡಲೇ ಬಸ್ ಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆ ನಡೆಸಬೇಕು. ಇದಕ್ಕಾಗಿ ತಂಡಗಳನ್ನು ರಚಿಸುವಂತೆ ಪತ್ರ ಬರೆದು ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular