ಬೆಂಗಳೂರು : ನಾಳೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸಾರಿಗೆ ನೌಕರರು ಮುಷ್ಕರಕೈ ಬಿಟ್ಟಿದ್ದಾರೆ.
ಹೌದು, ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಭರವಸೆ ಈಡೇರಿಸಲು ಮುಂದಾಗಿದೆ. ಈ ಹಿನ್ನೆಲೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ನಾಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್ ಎಂಬುದನ್ನು ಕಾದು ನೋಡಬೇಕಾಗಿದೆ.
ನಾಳೆ ಸಂಜೆ 4:30 ಕ್ಕೆ ಕಾವೇರಿ ನಿವಾಸದಲ್ಲಿ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆ ನಡೆಸಿ ಸಿಎಂ ಸಾರಿಗೆ ನೌಕರರ ಮನವಿ ಆಲಿಸಲಿದ್ದಾರೆ.