ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾರಿಗೆ ನೌಕರರು 15 ದಿನಗಳಲ್ಲಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹವನ್ನು ಸಾರಿಗೆ ನೌಕರರು ಮುಂದೂಡಿದ್ದಾರೆ.
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಂತ ಸುಬ್ಬರಾವ್ ನೇತೃತ್ವದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಸತ್ಯಾಗ್ರಹ ಕೈಗೊಂಡಿತ್ತು.
ಜಂಟಿ ಕ್ರಿಯಾ ಸಮಿತಿಯ ಜೊತೆಗೆ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. 15 ದಿನಗಳಲ್ಲಿ ಸಿಎಂ ಸಭೆ ನಡೆಸದಿದ್ದರೆ ನವೆಂಬರ್ 1ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು. ನವೆಂಬರ್ 1ರಿಂದ ಉಪವಾಸ ಸತ್ಯಾಗ್ರಹ ನಡೆಸಲು ಜಂಟಿ ಕ್ರಿಯಾ ಸಮಿತಿ ನಿರ್ಧಾರ ಕೈಗೊಂಡಿದೆ.