HomeLatest NewsBREAKING: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ನಾಳಿನ ಬೆಂಗಳೂರು ಚಲೋ ಮುಂದೂಡಿಕೆ

BREAKING: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ನಾಳಿನ ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್(84) ವಿಧಿವಶರಾಗಿದ್ದಾರೆ. ಸಂಜೆ 5:30ರ ಸುಮಾರಿಗೆ ಅವರಿಗೆ ಹೃದಯಘಾತ ಸಂಭವಿಸಿದ್ದು, ಕೂಡಲೇ ಅವರನ್ನು ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಿಜಯನಗರದ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅನಂತ ಸುಬ್ಬರಾವ್ ಅವರು ಕರ್ನಾಟಕದ ಹಿರಿಯ ಕಾರ್ಮಿಕ ಮುಖಂಡರಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಕಾರ್ಮಿಕರ ಹಕ್ಕುಗಳ ಪರವಾಗಿ ನಿರಂತರವಾಗಿ ಹೋರಾಡುತ್ತಿದ್ದಾರೆ ಮತ್ತು ಸಾರಿಗೆ ನೌಕರರ ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಹೋರಾಟದ ನೇತೃತ್ವ ವಹಿಸಿದ್ದರು. ಅನಂತ ಸುಬ್ಬರಾವ್ ಅವರು ಕಾರ್ಮಿಕರ ಹಕ್ಕುಗಳ ಪರವಾಗಿ ರಾಜಿ ಮಾಡಿಕೊಳ್ಳದ ಹೋರಾಟಗಾರರೆಂದು ಹೆಸರುವಾಸಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಂತ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿ ನಾಳೆ ಕರೆದಿದ್ದ ಬೆಂಗಳೂರು ಚಲೋ ಮುಂದೂಡಲಾಗಿದೆ ಎಂದು ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular