HomeEntertainmentBREAKING : ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ನಟ ದರ್ಶನ್ ವಿರುದ್ಧ ಮಹಿಳಾ...

BREAKING : ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು : ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಡಿ ಬಾಸ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ನಟ ದರ್ಶನ್ ಗೆ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗರ ಗೌಡತಿಯರ ಸಂಘದಿಂದ ದೂರು ದಾಖಲಾಗಿದೆ. ಜಯಶ್ರೀ ಎಂಬುವವರು ಕಾವೇರಿ ಭವನದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇವತ್ತು ಇವಳು  ಇರ್ತಾಳೆ , ನಾಳೆ ಅವಳು ಇರ್ತಾಳೆ ಎಂದು ಹೇಳುವ ಮೂಲಕ ನಟ ದರ್ಶನ್ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಬೆಳ್ಳಿಪರ್ವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಮೇಲೆ ದರ್ಶನ್ ತಮ್ಮ ವೃತ್ತಿ ಬದುಕಿನ ಬಗ್ಗೆ ಮಾತಾಡುವಾಗ ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ದರು.

ಕಷ್ಟಪಟ್ಟಾಗ ಮಾತುಗಳು ಕಹಿಯಾಗಿರುತ್ತೆ. ಅದು ಕೆಲವರಿಗೆ ಹಿಡಿಸಲ್ಲ. ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ನನ್ನ ಸೆಲೆಬ್ರಿಟಿಗಳು, ನನ್ನ ಕೆಲಸ ಮುಖ್ಯ, ಬೇರೆಯದಕ್ಕೆ ತಲೆಕೆಡಿಸಿಕೊಳ್ಳಲ್ಲ. ಇವತ್ತು ಇವಳು  ಇರ್ತಾಳೆ , ನಾಳೆ ಅವಳು ಇರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ” ಎಂದು ನಟ ದರ್ಶನ್ ಹೇಳಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular