ಮೈಸೂರು: ಅಕ್ರಮವಾಗಿ ಕೇರಳದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವೆಂಕಟೇಶ್ವರ ವೇಬ್ರಿಡ್ಜ್ ಸಮೀಪ ಅರುಣ್ ಕುಮಾರ್ ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. 33 ಸಾವಿರ ರೂಪಾಯಿ ಮೌಲ್ಯದ ಲಾಟರಿ ಟಿಕೆಟ್ ಮತ್ತು 20 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
ಸಿಂಚನಾ ಹೋಟೆಲ್ ನಲ್ಲಿ ಮತ್ತೊಬ್ಬ ಆರೋಪಿ ಸ್ವಾಮಿಯನ್ನು ಬಂಧಿಸಲಾಗಿದೆ. 33,000 ಮೌಲ್ಯದ ಲಾಟರಿ ಟಿಕೆಟ್ ಹಾಗೂ 2,930 ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಒಟ್ಟು 55,200 ರೂ. ಮೌಲ್ಯದ ಲಾಟರಿ ಟಿಕೆಟ್ 23 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

