ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಇಂಜಿನಿಯರ್ ಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಇಂಜಿನಿಯರ್ ಗಳು ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿಯ ಎಇಇ ಮಹದೇವ, ಎಇ ಸುರೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ಬಿಬಿಎಂಪಿ ಹೆಬ್ಬಾಳ ಉಪ ವಿಭಾಗದಲ್ಲಿ ಮಹದೇವ, ಆರ್.ಎಂವಿ. ವಿಭಾಗದಲ್ಲಿ ಸುರೇಂದ್ರ ಕಾರ್ಯನಿರ್ವಹಿಸುತ್ತಿದ್ದಾರೆ.
ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಸಂಜಯ್ ಎಂಬುವವರಿಂದ 5 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಎಇಇ ಮಹದೇವ, ಎಇ ಸುರೇಂದ್ರ ಅವರನ್ನು ಬಂಧಿಸಿ ಹಣ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.