ವಿಜಯಪುರ: ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಮರಗೂರು ಸಮೀಪ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ.
ಗೊರನಾಳ ಗ್ರಾಮದ ಧರ್ಮಣ್ಣ ಹೊಸಮನೆ(41) ಮತ್ತು 25 ವರ್ಷದ ಬೀರಪ್ಪ ಪೂಜಾರಿ ಮೃತಪಟ್ಟವರು. ಮರಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಧರ್ಮಣ್ಣ, ಬೀರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

