ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿದ್ದಾರೆ.
ದಾಬಸ್ ಪೇಟೆಯ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಡಿಕ್ಕಿಯಾದ ರಭಸಕ್ಕೆ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

