ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಘಟನೆಯ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೈಲನಹಳ್ಳಿ ಓಬಣ್ಣ(50) ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.