HomeKarnatakaBREAKING: ಕಲ್ಲುಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

BREAKING: ಕಲ್ಲುಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಬಾಗಲಕೋಟೆ: ಕಲ್ಲುಕ್ವಾರಿಯಲ್ಲಿ ಕ್ವಾರಿಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹನುಮನಾಳದ ಸಮೀಪ ಘಟನೆ ನಡೆದಿದೆ.

ವಿನಾಯಕ ಗೊಲ್ಲರ(10), ವಿಜಯ ವಾಲಿಕಾರ(15) ಮೃತಪಟ್ಟವರು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಇಳಕಲ್ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಂತಿದ್ದ ಲಾರಿಗೆ ಕೋಳಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ: ರಾಜ್ಯದಲ್ಲಿ ರಣ ಬಿಸಿಲ ನಡುವೆ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿದ್ದು, ನಿಂತಿದ್ದ ಲಾರಿಗೆ ಕೋಳಿ ಸಾಗಿಸುತ್ತಿದ್ದ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ಈ ದುರಂತ ಸಂಭವಿಸಿದೆ.

ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಕೋಳಿ ತುಂಬಿದ ಗೂಡ್ಸ್ ವಾಹನ ಹೊರಟ್ಟಿತ್ತು. ಈ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ವಾಹನ ಡಿಕ್ಕಿಯಾಗಿದೆ. ‌ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ನೂರಾರು ಕೋಳಿಗಳು ಸಹ ಸಾವನ್ನಪ್ಪಿವೆ.

ಮೃತರನ್ನು ವಾಸಿಂಮ್ (28) ಮುಬಾರಕ್ (22) ಎಂದು ಗುರುತಿಸಲಾಗಿದೆ. ವಾಹನ ಚಾಲಕ ಬಸವರಾಜ್ ಈರಪ್ಪ ಹಂಚಿನಮನಿ (37) ಸ್ಥಿತಿ ಗಂಭಿರವಾಗಿದೆ.ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ  ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಸೇರಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಗಾಯಾಳುವನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular