HomeLatest NewsBREAKING: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಹೋದರರಿಬ್ಬರು ಸಾವು

BREAKING: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಹೋದರರಿಬ್ಬರು ಸಾವು

ಕೋಲಾರ: ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೊತ್ತೂರು ಸಮೀಪ ನಡೆದಿದೆ.

ದೇವಕಿರಣ್(12), ವಿನುತ್(9) ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಸಹೋದರರು. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ ಇಬ್ಬರೂ ಬಾಲಕರು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿಟ್ಟಾರೆ. ಘಟನಾ ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ 15 ದಿನದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಸುರಕ್ಷಿತ ಕ್ರಮಕ್ಕೆ ಆದೇಶದ ನಡುವೆಯೂ ಮತ್ತೊಂದು ದುರ್ಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular