ಚಿಕ್ಕಮಗಳೂರು: ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ ಕುಮಾರಪ್ಪ(60), ಸತೀಶ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತ್ತೊಂದು ಕಾರ್ ನಲ್ಲಿದ್ದ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
