HomeLatest NewsBREAKING: ಎರಡು ಕಾರ್ ಗಳ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು

BREAKING: ಎರಡು ಕಾರ್ ಗಳ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಚಿಕ್ಕಮಗಳೂರು: ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ ಕುಮಾರಪ್ಪ(60), ಸತೀಶ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತ್ತೊಂದು ಕಾರ್ ನಲ್ಲಿದ್ದ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular