ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ಸಂಭವಿಸಿದೆ.
11 ವರ್ಷದ ಬಾಲಕಿ ಅರಣವಿ, 20 ವರ್ಷದ ಯಶ್ ಎಂಬ ಯುವಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆರು ಜನ ಗಂಭೀರವಾಗಿ ಗಾಯಗೊಂಡಿದ್ದು, 26 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡಿಗೆ ಬಸ್ ಹೋಗುತ್ತಿತ್ತು. ಅಡ್ಡ ಬಂದ ಕಾರ್ ತಪ್ಪಿಸಲು ಹೋಗಿ ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಾವೇರಿ ಪೊಲೀಸ್ ಅಧೀಕ್ಷಕರಾದ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳಿದ ಪ್ರಯಾಣಿಕರನ್ನು ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ರಕ್ಷಣೆ ಮಾಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.