ದಾವಣಗೆರೆ: ಭದ್ರಾ ಕಾಲುವೆಗೆ ಕಾರ್ ಬಿದ್ದು ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಪಾರಾಗಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಸಮೀಪ ಭದ್ರಾ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ.
ಕಾರ್ ನಲ್ಲಿದ್ದ ಮಲ್ಲಿಕಾರ್ಜುನ(29), ಸಿದ್ದೇಶ್(38) ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಆರು ಜನ ಮಂಗಳೂರು ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಭದ್ರಾ ಕಾಲುವೆಗೆ ಬಿದ್ದಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವಿಗೆ ಬಿದ್ದಿದ್ದು, ಈ ವೇಳೆ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಈಜಿ ದಡ ಸೇರಿದ್ದಾರೆ. ಮಧ್ಯರಾತ್ರಿ ಹೊಸೂರು ಬಳಿ ಭದ್ರಾ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಂತೆಬೆನ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
