BREAKING : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್ ಧೃಡ, ಆತಂಕ ಸೃಷ್ಟಿ..!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಧೃಡವಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಆತಂಕ ಸೃಷ್ಟಿಯಾಗಿದೆ.

ಆಸ್ಪತ್ರೆಗೆ ದಾಖಲಾದ 49 ಮೆಡಿಕಲ್ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಧೃಡವಾಗಿದೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು . ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ 49 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ ಜನರು ಹೈರಾಣಾಗುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ರಣಬಿಸಿಲು ಆರಂಭವಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಕಲಬುರ್ಗಿಯಲ್ಲಿ ಅತ್ಯಧಿಕ 42 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಿಸಿಗಾಳಿ ಬೀಸುತ್ತಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ರಣಬಿಸಿಲಿನಿಂದಾಗಿ ಜನರಲ್ಲಿ ಅತಿಸಾರ, ಡಿಹೈಡ್ರೇಷನ್, ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಡೆಂಘಿ, ಚಿಕನ್ ಗುನ್ಯಾ ರೋಗವು ಹೆಚ್ಚುತ್ತಿದೆ. ಕಳೆದ ಮೂರು ತಿಂಗಳಲ್ಲಿ 1663 ಡೆಂಘಿ ಪ್ರಕರಣ ಪತ್ತೆಯಾಗಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿಯೇ 535 ಪ್ರಕರಣಗಳು ದಾಖಲಾಗಿವೆ. ಬಿಸಿಲ ಝಳ, ನೀರಿನ ಸಮಸ್ಯೆಗಳ ಜೊತೆಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read