ಬೆಂಗಳೂರು: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿಯಾಗಿದ್ದಾರೆ. ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ.
ನೈಸ್ ರಸ್ತೆ ಬದಿ ಹುಲ್ಲು ತೆರವುಗೊಳಿಸುತ್ತಿದ್ದ ರಂಗಮ್ಮ ಮತ್ತು ಚೌಡಮ್ಮ ಅವರಿಗೆ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
