HomeLatest NewsBREAKING: ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ಜಗಳ: ಗುದ್ದಲಿಯಿಂದ ಹೊಡೆದು ಓರ್ವನ ಕೊಲೆ

BREAKING: ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ಜಗಳ: ಗುದ್ದಲಿಯಿಂದ ಹೊಡೆದು ಓರ್ವನ ಕೊಲೆ

ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಜಗಳವಾಗಿದ್ದು, ಓರ್ವನ ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ಸಮೀಪ ನಡೆದಿದೆ.

ಗುದ್ದಲಿಯಿಂದ ಹೊಡೆದು ಮಾಲತೇಶ ದಾಸಪ್ಪನವರ(32) ಅವರನ್ನು ಕೊಲೆ ಮಾಡಲಾಗಿದೆ. ಕೊಲೆ ಆರೋಪಿ ಚಿನ್ನಪ್ಪ ಬೆನ್ನೂರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಲತೇಶ ಅವರ ಕಾರ್ ಅನ್ನು ಮಾರಾಟ ಮಾಡಿಸಿದ್ದ ಆರೋಪಿ ಚಿನ್ನಪ್ಪ ಬಂದ ಹಣವನ್ನು ಮಾಲತೇಶನಿಗೆ ಕೊಟ್ಟಿರಲಿಲ್ಲ. ಹಣ ಕೊಡುವಂತೆ ಕೇಳಿದಾಗ ಇಬ್ಬರ ನಡುವೆ ಗಲಾಟೆಯಾಗಿ ಹತ್ಯೆ ಮಾಡಲಾಗಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular