ಕೋಲಾರ: ಕ್ಯಾಂಟರ್ ಡಿಕ್ಕಿಯಾಗಿ ಬುಲೆಟ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹರೀಕೆರೆ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರದ ಶಶಿ(25) ಮತ್ತು ನೆಲಮಂಗಲದ ನಿವಾಸಿ ತನುಷ್(25) ಮೃತಪಟ್ಟವರು ಎಂದು ಗುರುತಿಸಲಾಗಿದೆ, ಕಾಣಿಪಾಕಂ ದೇವಾಲಯಕ್ಕೆ ಬುಲೆಟ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ, ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

