ಬಳ್ಳಾರಿ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಬಳಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಬ್ದುಲ್ ರೆಹಮಾನ್(21), ನಾಜ್(6) ಮೃತಪಟ್ಟವರು ಎಂದು ಹೇಳಲಾಗಿದೆ. ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಬಳ್ಳಾರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.