HomeKarnatakaBREAKING : ಚಿಕ್ಕಬಳ್ಳಾಪುರದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ...

BREAKING : ಚಿಕ್ಕಬಳ್ಳಾಪುರದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ : ಮರಕ್ಕೆ ಬಸ್ ಡಿಕ್ಕಿ ಹೊಡೆದು ನಂತರ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯದಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನಂತರ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.

ಸಕಾಲಕ್ಕೆ ಆಂಬುಲೆನ್ಸ್ ಬಾರದ ಹಿನ್ನೆಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಗಾಯಾಳುಗಳನ್ನು ಬೈಕ್ ನಲ್ಲಿ ಹಾಗೂ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಗಾಯಾಳುಗಳನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 30 ಕ್ಕೂ ಹೆಚ್ಚು ಮಂದಿಗೆ ತೀವ್ರತರಹದ ಗಾಯಗಳಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular