ಬೆಳಗಾವಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹಿರೇಗಾಗೇವಾಡಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಯುಕ್ತ ಭೂಷಣ್ ಬೊರಸೆ ಭೇಟಿ ನೀಡಿದ್ದು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಅಪಘಾತದಲ್ಲಿ ಇಬ್ಬರು ಸಾವು ಕಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬಸ್ ಚಾಲಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಬಸ್ ಬಡೇಕೊಳ್ಳ ಮಠ ಘಾಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.