HomeLatest NewsBREAKING: ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ

BREAKING: ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ

ಬೆಳಗಾವಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹಿರೇಗಾಗೇವಾಡಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಯುಕ್ತ ಭೂಷಣ್ ಬೊರಸೆ ಭೇಟಿ ನೀಡಿದ್ದು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಅಪಘಾತದಲ್ಲಿ ಇಬ್ಬರು ಸಾವು ಕಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬಸ್ ಚಾಲಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಬಸ್ ಬಡೇಕೊಳ್ಳ ಮಠ ಘಾಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular