HomeKarnatakaBREAKING : ಹಾಸನದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ...

BREAKING : ಹಾಸನದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಹಾಸನ : ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರ ಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಪ್ರದೀಪ್ (30) ಗುರು (25) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular