HomeKarnatakaBREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಅರೆಸ್ಟ್..!

BREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಜಗದೀಶ್ ಹಾಗೂ ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಪ್ರಕರಣದ ಹಿನ್ನೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ), ಈ ರೇಣುಕಾ ಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು . ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular