ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಕಾರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಾರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ದೆಹಲಿಯ ಎಲ್.ಎನ್.ಜೆ.ಪಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ. ವಿನಾಯಕ ಪಾಠಕ್(50), ಮೊಹಮ್ಮದ್ ಲುಕ್ಮಾನ್(73) ಮೃತಪಟ್ಟವರು.
ನವೆಂಬರ್ 10 ರಂದು ದೆಹಲಿಯ ಕೆಂಪುಕೋಟೆಯ ಬಳಿ ಕಾರ್ ಸ್ಫೋಟಗೊಂಡಿದ್ದು, ಕಾರ್ ನಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಉಗ್ರ ಡಾ..ಉಮರ್ ಮೃತಪಟ್ಟಿದ್ದ. ಸ್ಪೋಟದಿಂದ ಅನೇಕರು ಗಾಯಗೊಂಡಿದ್ದರು. ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ.
