HomeKarnatakaBREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತಿಬ್ಬರು ಬಲಿ!

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತಿಬ್ಬರು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಪ್ರತ್ಯಕ ಅಪಘಾತ ಪ್ರಕರಣಗಳಲ್ಲಿ ಓರ್ವ ಮಹಿಳೆ ಹಾಗೂ ಬೈಕ್ ಸವಾರರೊಬ್ಬರ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯನಗರದ ಗೋವಿಂದರಾಜನಗರದ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ಘಟನೆಯಲ್ಲಿ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ  ರಸ್ತೆದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿ ವೀಣಾ ಎನ್ನುವವರು ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular