BREAKING : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಮತ್ತೆ ಇಬ್ಬರು ಬಲಿ : ಮೃತರ ಸಂಖ್ಯೆ 20 ಕ್ಕೆ ಏರಿಕೆ!

ಕಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂದೂ ಮತ್ತೆ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿರುವಾಗ ಮಧ್ಯರಾತ್ರಿಯಿಂದ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಹತ್ಯೆಗೀಡಾದವರಲ್ಲಿ 9 ಟಿಎಂಸಿ ಸದಸ್ಯರು, ಬಿಜೆಪಿ, ಸಿಪಿಐ (ಎಂ) ಮತ್ತು ಕಾಂಗ್ರೆಸ್ನ ತಲಾ ಒಬ್ಬ ಕಾರ್ಯಕರ್ತ ಮತ್ತು ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರು ಸೇರಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಕನಿಷ್ಠ ಎರಡು ಮತಗಟ್ಟೆಗಳಲ್ಲಿ ಮತಪೆಟ್ಟಿಗೆಗಳನ್ನು ನಾಶಪಡಿಸಲಾಗಿದೆ ಎಂದು ವರದಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read